ಬೆಂಗಳೂರು ಗ್ರಾಮಾಂತರ ನನ್ನ ವೈಯಕ್ತಿಕ ಸೋಲು:ಡಿ ಕೆ ಶಿವಕುಮಾರ್
ಬೆಂಗಳೂರು:” ಇದು ನನ್ನ ವೈಯಕ್ತಿಕ ಸೋಲು. ಬೆಂಗಳೂರು ಗ್ರಾಮಾಂತರ ಸೋಲಿನಿಂದ ಮೊದಲು ಚೇತರಿಸಿಕೊಳ್ಳಬೇಕು. ಒಂದು ವಿಷಯ ಸ್ಪಷ್ಟವಾಗಿ ಹೇಳುತ್ತೇನೆ. ನಾನು ಸೋತಿದ್ದೇನೆ ಎಂದ ಮಾತ್ರಕ್ಕೆ ಸುಮ್ಮನಿರುವುದಿಲ್ಲ” ಎಂದು ಹೇಳಿದರು. ಎಂದು ಉಪಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಸಿ.ಎನ್.ಮಂಜುನಾಥ್ 2.69 ಲಕ್ಷ ಮತಗಳ ಅಂತರದಿಂದ ಗೆದ್ದಿರುವ ಬಗ್ಗೆ ಈ ಸಂದರ್ಭದಲ್ಲಿ ಉಲ್ಲೇಖಿಸಿದರು. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ವಿರೋಧಿ ಮತಗಳು ಒಂದಾಗುತ್ತವೆ ಎಂದು ಗೊತ್ತಿತ್ತು. ಅಲ್ಪಸಂಖ್ಯಾತರನ್ನು ಹೊರತುಪಡಿಸಿ ಎಲ್ಲ ಬಿಜೆಪಿ ಮತ್ತು ಜೆಡಿಎಸ್ ಮತಗಳು ಒಟ್ಟಿಗೆ ಬರುತ್ತವೆ ಎಂದು ನಮಗೆ ತಿಳಿದಿತ್ತು. ಆದರೆ, ಅದು ಆ ರೀತಿ ಆಗುತ್ತದೆ ಎಂದು ನಾವು ನಿರೀಕ್ಷಿಸಿರಲಿಲ್ಲ. ಇದು ನನ್ನ ವೈಯಕ್ತಿಕ ಸೋಲಾಗಿದೆ ಎಂದು ತಿಳಿಸಿದರು.