ಯಡಿಯೂರಪ್ಪ ಪ್ರಮಾಣ ವಚನ :- ಉಡುಪಿ ನಗರ ಬಿಜೆಪಿಯಿಂದ ಸಂಭ್ರಮಾಚರಣೆ

ಉಡುಪಿ: ಇಂದು ಸಂಜೆ ರಾಜ್ಯದ 14 ನೇ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಸಂಧರ್ಭ ಉಡುಪಿ ನಗರ ಬಿಜೆಪಿ ವತಿಯಿಂದ ಹರ್ಷಚಾರಣೆ ಆಚರಿಸಲಾಯಿತು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುವುದನ್ನು ನೇರಪ್ರಸಾರವನ್ನು ಟಿ.ವಿ. ಮೂಲಕ ವೀಕ್ಷಿಸಿದ ಬಿಜೆಪಿ ಕಾರ್ಯಕರ್ತರು ನಂತರ ಸಿಹಿತಿಂಡಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.

ಈ ಸಂದರ್ಭ ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ,ಕಾರ್ಯದರ್ಶಿ ಜಗದೀಶ ಆಚಾರ್ಯ,ನಗರಸಭಾ ಸದಸ್ಯರಾದ ಗಿರೀಶ ಅಂಚನ್,ಗೀತಾ ಶೇಟ್,ಯೋಗೀಶ ಸಾಲ್ಯಾನ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಅಧ್ಯಕ್ಷ ಶ್ರೀಶ ನಾಯಕ್, ಕೆ.ರಾಘವೇಂದ್ರ ಕಿಣಿ, ಸುರ್ವಧನ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!